ಮೈಸೂರು

ಗ್ಯಾಂಗ್ ರೇಪ್ ಪ್ರಕರಣ : ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ

ಮೈಸೂರು,ಆ.26:- ಮೈಸೂರಿನ ಹೊರವಲಯದಲ್ಲಿರುವ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ  ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಂದು ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಡಿಜಿಪಿ ಅವರ ಜೊತೆ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಕೂಡ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.  ದೂರು ನೀಡಿದ ಆಧಾರದ ಮೇಲೆ ನಿನ್ನೆ ಕೂಡ ಪೊಲೀಸರು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

ಇಂದು ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಟ್ರೇಸಿಂಗ್ ನಡೆಯುತ್ತಿದೆ. ಆ ಸ್ಥಳದಲ್ಲಿ ಮೊಬೈಲ್ ಬಳಸಿದವರ ಜಾಡು ಹಿಡಿಯಲಾಗುತ್ತಿದೆ. ವಿದ್ಯಾರ್ಥಿನಿಯ ಸ್ನೇಹಿತನ ಮೊಬೈಲ್ ನಂಬರ್ ಆ ಸ್ಥಳದಲ್ಲಿ ಬಳಕೆಯಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಒಟ್ಟು ಆರು ಮಂದಿ  ಇದ್ದರು ಎಂದು ಹೇಳಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: