ಕರ್ನಾಟಕಪ್ರಮುಖ ಸುದ್ದಿಮೈಸೂರು

ನಗರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ : ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು, ಆ.26:- ನಗರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಅವರಿಂದು ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮೈಸೂರು ನಗರ ಪೊಲೀಸ್ ಆಯುಕ್ತ ಹಾಗೂ ಹಾಗೂ ಡಿಸಿಪಿಗಳ ವರ್ಗಾವಣೆ ಸುಳಿವು ನೀಡಿದರು. ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್.

ನಗರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ . ಶೂಟ್ ಔಟ್, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸ್ ನಿರ್ಲಕ್ಷ್ಯ ಎದ್ದುಕಂಡಿದೆ . ಪೊಲೀಸ್ ವೈಫಲ್ಯದ ಬಗ್ಗೆ ಜನತೆ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರ ಭಾವನೆಗೆ ಸರ್ಕಾರ ಸ್ಪಂದಿಸಬೇಕಾಗುತ್ತದೆ. ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಪರಿಶೀಲನೆಗೆ ಎಡಿಜಿಪಿ ಅವರನ್ನೇ ಸರ್ಕಾರ ನಿಯೋಜಿಸಿದೆ. ಜತೆಗೆ ಗೃಹ ಸಚಿವರೇ ಮೈಸೂರಿಗೆ ಆಗಮಿಸಿ ಪರಿಶೀಲನೆ ನಡೆಸಲಿದ್ದಾರೆ. ಎಡಿಜಿಪಿ ವರದಿ ನಂತರ ನಿರ್ಲಕ್ಷ್ಯದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ ಎಂದು ತಿಳಿಸಿದರು

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಎರಡು ಸೆಕ್ಷನ್ ‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.  ಆರೋಪಿಗಳ ವಿರುದ್ಧ ಸೆಕ್ಷುವಲ್ ಅಸಲ್ಟ್ ಕೇಸ್ ದಾಖಲಿಸಲಾಗಿದೆ.  ಸೆಕ್ಷನ್ 376 ಡಿ ಹಾಗೂ 397 ಹಾಕಿ ಎಫ್‌ಐಆರ್ ದಾಖಲಿಸಲಾಗಿದೆ. 376 ಡಿ ಸಾಮೂಹಿಕ ಅತ್ಯಾಚಾರ,  397 ಡಕಾಯಿತಿ ನಡೆಸಿದ ಕೇಸ್ ದಾಖಲಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: