ಕರ್ನಾಟಕಪ್ರಮುಖ ಸುದ್ದಿ

ಸುಪ್ರೀಂ ಆದೇಶ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸರ್ವಪಕ್ಷ ಸಭೆ ನಿರ್ಧಾರ

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಇಂದು ಸುಪ್ರೀಂ ಕೋರ್ಟ್‍ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಂದಿನ ನಡೆ ಬಗ್ಗೆ ನಿರ್ಣಯ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಎಲ್ಲರಿಗೂ ಚರ್ಚೆಗೆ ಸಿಎಂ ಮುಕ್ತ ಅವಕಾಶ ನೀಡಿದ್ದರು.

ಮಾಜಿ ಸಿಎಂ ಎಚ್‍.ಡಿ. ಕುಮಾರಸ್ವಾಮಿ, ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದ ಗೌಡ, ರಮೇಶ್ ಜಿಗಜಿಣಗಿ, ಸಂಸದರಾದ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ಮೊದಲಾದವರು ಸಭೆಯಲ್ಲಿ ಬಾಗವಹಿಸಿದ್ದರು.

Leave a Reply

comments

Related Articles

error: