ಮೈಸೂರು

 ತೋಟಗಾರಿಕಾ ದಿನ ಆಚರಣೆ: ಕ್ರಾಫ್ಟ್ ಶಿಕ್ಷಕರಿಗೆ ಹಣ್ಣಿನ ಗಿಡ ವಿತರಣೆ

ಮೈಸೂರು, ಆ.26:- ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಹಯೋಗದೊಂದಿಗೆ   ಡಾ.ಎಂ.ಹೆಚ್.ಮರೀಗೌಡ ಅವರ ಜನ್ಮ ದಿನದ ಅಂಗವಾಗಿ “ತೋಟಗಾರಿಕೆ ದಿನ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ಯೋಗೀಶ್ ಅವರು ಉದ್ಘಾಟಿಸಿದರು.

ಇದೇ ವೇಳೆ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ಕ್ರಾಫ್ಟ್ ಶಿಕ್ಷಕರಿಗೆ ಪೌಷ್ಟಿಕ ಕೈತೋಟ ಅಭಿಯಾನ ಕುರಿತು ಮಾಹಿತಿ ನೀಡಿ ವಿವಿಧ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ನಿವೃತ್ತ ನಿರ್ದೇಶಕರಾದ ಡಾ.ಹನುಮಯ್ಯ, ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಜನಾರ್ಧನ್, ತೋಟಗಾರಿಕೆ ಜಂಟಿ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ), ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

comments

Related Articles

error: