ಕರ್ನಾಟಕದೇಶ

ಮೇ.1 ರಂದು ಮೇಲುಕೋಟೆಯಲ್ಲಿ ರಾಮಾನುಜರ ಸಹಸ್ರಮಾನೋತ್ಸವ

ಮೇಲುಕೋಟೆ : ಸಂಸ್ಕೃತ ಸಂಶೋಧನಾ ಸಂಸತ್ ಮೇಲುಕೋಟೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಜಯಂತಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಮೇ.1 ರಂದು ಬೆಳಿಗ್ಗೆ 11 ಗಂಟೆಗೆ ಮೇಲುಕೋಟೆ ಸಂಸ್ಕೃತ ಸಂಶೋಧನಾ ಸಂಸತ್ ಆವರಣದ ಶ್ರೀ ರಾಮಾನುಜರ ವೇದಿಕೆಯಲ್ಲಿ ಏರ್ಪಡಿಸಲಾಗಿದೆ.

ಸಮಾರಂಭದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ನಡೆಸಿಕೊಡಲಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಪದ್ಮಾಶೇಖರ್ ಅವರು ಅಧ್ಯಕ್ಷತೆ ವಹಿಸುವರು.

ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪ ಅವರು ಗ್ರಂಥಗಳ ಬಿಡುಗಡೆ ಮಾಡುವರು. ಸಂಸ್ಕೃತ ವಿದ್ವಾಂಸರು ಹಾಗೂ ಖ್ಯಾತ ವಿಮರ್ಶಕರಾದ ಡಾ. ಎ.ರಾಮಸ್ವಾಮಿ ಅಯ್ಯಂಗಾರ್ ಅವರು ಶ್ರೀ ರಾಮಾನುಜರ ಕುರಿತು ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ಸಿ.ಎಸ್.ಪುಟ್ಟರಾಜು, ಮೇಲುಕೋಟೆ ಶಾಸಕರ ಕೆ.ಎಸ್.ಪುಟ್ಟಣ್ಣಯ್ಯ ಅವರು ಭಾಗವಹಿಸುವರು.

(ಎನ್.ಬಿ.ಎನ್)

Leave a Reply

comments

Related Articles

error: