ಕ್ರೀಡೆಪ್ರಮುಖ ಸುದ್ದಿವಿದೇಶ

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯ: ಭಾರತ ತಂಡಕ್ಕೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸೇರ್ಪಡೆ

ಲಂಡನ್,ಸೆ.1-ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ. “ಅಖಿಲ ಭಾರತ ಸೀನಿಯರ್ ಆಯ್ಕೆ ಸಮಿತಿಯು ತಂಡದ ಮ್ಯಾನೇಜ್‌ಮೆಂಟ್‌ನ ಕೋರಿಕೆಯ ಮೇರೆಗೆ ವೇಗದ ಬೌಲರ್ ಪ್ರಸಿದ್ದ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್‌ಗಾಗಿ ಭಾರತ ತಂಡಕ್ಕೆ ಸೇರಿಸಿಕೊಂಡಿದೆ” ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಪ್ರಸಿದ್ಧ್ ಕೃಷ್ಣ ಪ್ರವಾಸದ ಆರಂಭದಿಂದಲೇ ಟೀಮ್ ಇಂಡಿಯಾದೊಂದಿಗೆ ತರಬೇತಿ ಹಾಗೂ ಪ್ರಯಾಣ ಮಾಡುತ್ತಿದ್ದಾರೆ.

ನಾಲ್ಕನೇ ಟೆಸ್ಟ್ ಪಂದ್ಯ ಸೆ.2 ರಿಂದ ಲಂಡನ್ ನ ಓವಲ್‌ನಲ್ಲಿ ಪ್ರಾರಂಭವಾಗಲಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: