ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 1,159 ಕೊರೋನಾ ಸೋಂಕು ಪ್ರಕರಣ ಪತ್ತೆ

ರಾಜ್ಯ(ಬೆಂಗಳೂರು)ಸೆ.2:- ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,159 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ 21 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,339ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ 359 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,38,196ಕ್ಕೆ ಏರಿಕೆಯಾಗಿದೆ. ನಗರದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 1,112 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,94,827ಕ್ಕೆ ಏರಿಕೆಯಾಗಿದೆ. ಇನ್ನು 18,412 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ 1,75,319 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,159 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.66ಕ್ಕೆ ಇಳಿದಿದೆ.

Leave a Reply

comments

Related Articles

error: