ಪ್ರಮುಖ ಸುದ್ದಿಮನರಂಜನೆಮೈಸೂರು

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ಕಿಚ್ಚ ಸುದೀಪ್

ಮೈಸೂರು, ಸೆ.3:- 50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಯ  ದರ್ಶನ ಪಡೆದರು.

ಇಂದು ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ವೇಳೆ ಅಲ್ಲಿ ಆಗಮಿಸಿದ್ದ ಅಭಿಮಾನಿಗಳತ್ತ ಕೈ ಬೀಸಿದರು. ಮೈಸೂರಿನಿಂದ ಅವರು ನೇರವಾಗಿ ಚನ್ನಪಟ್ಟಣದ ಗೌಡಗೆರೆಗೆ ನಟ ಕಿಚ್ಚ ಸುದೀಪ್ ದಂಪತಿ ಸಮೇತವಾಗಿ ತೆರಳಲಿದ್ದು 68 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹ ವೀಕ್ಷಣೆ ಹಾಗೂ ಪೂಜೆ ಸಲ್ಲಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆ ಇರುವುದರಿಂದ ದೇವಸ್ಥಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Leave a Reply

comments

Related Articles

error: