ಕರ್ನಾಟಕಪ್ರಮುಖ ಸುದ್ದಿಮೈಸೂರು

ಕಳೆದ ಬಾರಿಯಂತೆ ಈ ಬಾರಿಯೂ ಸರಳ ದಸರಾ ಆಚರಣೆ : ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ

ಮೈಸೂರು/ ಬೆಂಗಳೂರು, ಸೆ. 3:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.

ಕಳೆದ ಬಾರಿಯಂತೆ ಈ ಬಾರಿಯೂ ಸರಳ ಮೈಸೂರು ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಆಚರಣೆಗೆ 6 ಕೋಟಿ ರೂ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಭೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೊರೋನಾ ಹೋಗಿಲ್ಲ. 3ನೇ ಅಲೆ ಭೀತಿಯಲ್ಲಿದ್ದೇವೆ. ನೆರೆ ರಾಜ್ಯ ಕೇರಳಾದಲ್ಲಿ ಕೊರೋನಾ ಹೆಚ್ಚಳವಾಗಿದೆ. ಹೀಗಾಗಿ ಕಳೆದ ಬಾರಿಯಂತೆಯೇ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗುವುದು ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿ, ಅಕ್ಟೋಬರ್ 7 ರಂದು ದಸರಾ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 15 ರಂದು ದಸರಾ ಜಂಬೂ ಸವಾರಿ ನಡೆಯಲಿದೆ. ದಸರಾ ಯಾರು ಉದ್ಘಾಟನೆ ಮಾಡುತ್ತಾರೆ ಎಂಬುದನ್ನ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸುತ್ತಾರೆ ಎಂದರು.

ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಂಸದರು, ಶಾಸಕರು ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: