ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿವೇತನ ಅರ್ಜಿಗಳನ್ನು ಸಲ್ಲಿಸಲು ಅವಧಿ ವಿಸ್ತರಣೆ

ಮೈಸೂರು, ಸೆ.3 :- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ 2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2.5 ಲಕ್ಷದೊಳಗಿರುವ ಮೈಸೂರು ತಾಲ್ಲೂಕಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ನಿಗದಿತ ಸಮಯದೊಳಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ssp.postmatric.karnataka.gov.in ಮೂಲಕ ಅರ್ಜಿಸಲ್ಲಿಸಬಹುದು. ವಿದ್ಯಾರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ, ಅವರ ಆಧಾರ್ ಸಂಖ್ಯೆಯನ್ನು NPCI (National Payment Corporation of India) ರಲ್ಲಿ ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪಡುವಾರಹಳ್ಳಿ ಆದಿಪಂಪ ರಸ್ತೆ ಒಂಟಿಕೊಪ್ಪಲು ಪೂರ್ವ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ದೂರವಾಣಿ ಸಂಖ್ಯೆ:0821-2520910ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: