ಸುದ್ದಿ ಸಂಕ್ಷಿಪ್ತ

ಪ್ರವೇಶಾತಿ ದಿನಾಂಕ ವಿಸ್ತರಣೆ

ಮೈಸೂರು, ಸೆ.3:- ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಮಿರ್ಲೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 09ರವರೆಗೆ ವಿಸ್ತರಿಸಲಾಗಿದೆ.
ಲ್ಯಾಟರಲ್ ಎಂಟ್ರಿ ಪ್ರವೇಶ ಪ್ರಕ್ರಿಯೆ ಸಹ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 09ರವರೆಗೆ 2021-22ನೇ ಸಾಲಿನ ದ್ವಿತೀಯ ವರ್ಷಕ್ಕೆ (3ನೇ ಸೆಮಿಸ್ಟರ್‌ಗೆ) ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಐ.ಟಿ.ಐ ಅಥವಾ ದ್ವಿತೀಯ ಪಿ.ಯು.ಸಿ (ವಿಜ್ಞಾನ ಮತ್ತು ತಾಂತ್ರಿಕ ವಿಷಯ) ಪಾಸಾದ ಅರ್ಹ ವಿದ್ಯಾರ್ಥಿಗಳು ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ನೇರ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.9900300355, 9945650218, 9845268910 ಅನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

comments

Related Articles

error: