ಮೈಸೂರು

ಮೈಸೂರಿನಲ್ಲಿ ಇಂದಿನಿಂದ  ಅಂಬಾರಿ ಸೇವೆ – ಡಬಲ್ ಡೆಕ್ಕರ್  ಪುನರಾರಂಭ

ಮೈಸೂರು,ಸೆ.4:- ಮೈಸೂರಿನಲ್ಲಿ ಪ್ರವಾಸಿಗರಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಕೋವಿಡ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಅಂಬಾರಿ ಡಬಲ್ ಡೆಕ್ಕರ್ ಬಸ್ ಪ್ರವಾಸದ ಸೇವೆಯನ್ನು ಇಂದಿನಿಂದ ಪುನರಾರಂಭಿಸಲಾಗಿದ್ದು,  ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಅಂಬಾರಿ ವಾಹನವು ಸಂಚರಿಸುತ್ತಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾ.ಪು ಸಿದ್ಧಲಿಂಗಸ್ವಾಮಿ ಹೋಟೆಲ್ ಡಬ್ಬಲ್ ಡೆಕ್ಕರ್ ಬಸ್ ಇಂದಿನಿಂದ ಮೈಸೂರಿನಲ್ಲಿ ಸಂಚರಿಸಲಿದ್ದು, ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಬಸ್ ಮಯೂರ ಹೊಯ್ಸಳ, ಡಿಸಿ ಕಛೇರಿ, ಕುಕ್ಕರಹಳ್ಳಿ ಕೆರೆ, ಮೈಸೂರು ವಿಶ್ವವಿದ್ಯಾನಿಲಯ, ರಾಮಸ್ವಾಮಿ ಸರ್ಕಲ್, ಸಂಸ್ಕೃತ ಪಾಠಶಾಲೆ, ಕೆ.ಆರ್.ಸರ್ಕಲ್, ದೊಡ್ಡ ಗಡಿಯಾರ, ಅರಮನೆ ದಕ್ಷಿಣ ದ್ವಾರ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ಕಾರಂಜಿ ಕೆರೆ, ಗೌರ್ನಮೆಂಟ್ ಗೆಸ್ಟ್  ಹೌಸ್, ಸಂತ ಫಿಲೋಮಿನಾ ಚರ್ಚ್, ಬನ್ನಿಮಂಟಪ, ಆಯುರ್ವೇದಿಕ್ ಆಸ್ಪತ್ರೆ ಸರ್ಕಲ್, ರೈಲ್ವೆ ನಿಲ್ದಾಣದಿಂದ ಹಿಂದಿರುಗಿ ಹೋಟೆಲ್ ಮಯೂರ ಹೊಯ್ಸಳ  ತಲುಪಲಿದೆ.

ಪ್ರಯಾಣದ ದರ ಪೂರ್ತಿ ದಿನಕ್ಕೆ 250 ರೂ. ಆಗಿದ್ದು, ಬಸ್ಸಿನಲ್ಲಿ ಸಂಚರಿಸುವಾಗ ಪ್ರತಿ ಸ್ಥಳದ ಮಾಹಿತಿಯನ್ನು ಆಡಿಯೋ ವಿಡಿಯೋ ಸಿಸ್ಟಮ್‍ನಿಂದ ವಿವರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2423652 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: