
ದೇಶಪ್ರಮುಖ ಸುದ್ದಿ
ದೇಶದಾದ್ಯಂತ 67.72 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ನವದೆಹಲಿ,ಸೆ.4-ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು, 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 67,09,59,968 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)