ದೇಶಪ್ರಮುಖ ಸುದ್ದಿ

ಕೊಂಚ ತಗ್ಗಿದ ಕೊರೊನಾ ಅಬ್ಬರ: ದೇಶದಲ್ಲಿ 38,948 ಹೊಸ ಕೇಸ್ ಪತ್ತೆ; 219 ಸಾವು

ನವದೆಹಲಿ,ಸೆ.6-ಕೋವಿಡ್ 3ನೇ ಅಲೆಯ ಭೀತಿಯ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. 38,948 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇದೇ ಅವಧಿಯಲ್ಲಿ 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ. ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,30,27,621ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,752ಕ್ಕೆ ಏರಿಕೆಯಾಗಿದೆ.

ಈ ನಡುವೆ 43,903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,81,995ಕ್ಕೆ ತಲುಪಿದೆ.

ಕಳೆದ 73 ದಿನಗಳಲ್ಲಿ ವಾರದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2.58ರಷ್ಟಿದ್ದು, ದಿನಂಪ್ರತಿಯ ಪಾಸಿಟಿವ್ ದರ ಶೇ. 2.76ರಷ್ಟು ಕಳೆದ 7 ದಿನಗಳಲ್ಲಿ ದಾಖಲಾಗಿದೆ. ಇದುವರೆಗೆ ದೇಶದಲ್ಲಿ 53.14 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ರಾಷ್ಟ್ರಾದ್ಯಂತ ಲಸಿಕಾ ಅಭಿಯಾನದಲ್ಲಿ 68.75 ಕೋಟಿ ಡೋಸ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: