ಮೈಸೂರು

ಪೆಟ್ರೋಲ್, ಡೀಸೆಲ್ ಖರೀದಿಸಲು ಲೋನ್ ಸೌಲಭ್ಯ : ಅಣಕಿಸಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು,ಸೆ.8:- ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ, ಗೌರಿ ಗಣೇಶ ಹಬ್ಬದ  ಪ್ರಯುಕ್ತ ಪೆಟ್ರೋಲ್, ಡೀಸೆಲ್ ಖರೀದಿಸಲು ಲೋನ್ ಸೌಲಭ್ಯವಿದೆ ಎಂದು ಅಣಕಿಸಿ  ನಗರದ ಧನ್ವಂತರಿ  ರಸ್ತೆಯಲ್ಲಿರುವ ಡಬಲ್ ಪೆಟ್ರೋಲ್ ಬಂಕ್ ಹತ್ತಿರ    ಎನ್ ಎಸ್ ಯು ಐ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಮಾತನಾಡಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ನ್ನು ಲೀಟರ್ ಒಂದಕ್ಕೆ 35ರೂ. ಗಳಿಗೆ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಹಾಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ಸಹ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರಗಳನ್ನು ಗಗನಕ್ಕೆ ಏರಿಸಿದ್ದು ಇದರಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ . ಹಬ್ಬದ ದಿನಗಳಲ್ಲಿ ಗ್ಯಾಸ್, ಪೆಟ್ರೋಲ್ ಡೀಸೆಲ್ ಗಳನ್ನು ಲೋನ್ ಮೇಲೆ ಕೊಳ್ಳುವ ದಿನ ಎದುರಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಎನ್ ಎಸ್ ಯು ಐ ನ ಪ್ರಧಾನ ಕಾರ್ಯದರ್ಶಿ ರೋಹಿತ್ ಸಿಂಗ್, ರಫೀಕ್ ಅಲಿ,ಕಾರ್ಯದರ್ಶಿಗಳಾದ ಪ್ರಶಾಂತ್, ಶಿಕ್ಷಣ್, ಕಾಂಗ್ರೆಸ್ ಮುಖಂಡರಾದ ಸಕ್ಲೇನ್, ಪುಟ್ಟೇಗೌಡ, ಕುಮಾರ್, ಸಂತೋಷ್ ಕಿರಾಳು, ಗೋಪಾಲ್ ರಾಜ್ ಮತ್ತಿತರರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: