ಮೈಸೂರು

ಗೌರಿ-ಗಣೇಶ ಹಬ್ಬದ ಹಿನ್ನೆಲೆ: ಮಾರುಕಟ್ಟೆಯಲ್ಲಿ ಖರೀದಿ ಜೋರು

ಮೈಸೂರು,ಸೆ.8-ಗೌರಿ-ಗಣೇಶ ಹಬ್ಬದ ಆಚರಣೆಗೆ ಸಾಂಸ್ಕೃತಿಕ ನಗರಿ ಸಜ್ಜುಗೊಂಡಿದೆ. ಕೊರೊನಾ ಭೀತಿಯ ನಡುವೆಯೂ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಸಾರ್ವಜನಿಕರು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದರು. ಇದರಿಂದ ಮಾರುಕಟ್ಟೆಯಲ್ಲಿ ಜನಜಂಗುಳಿ ಹೆಚ್ಚಾಗಿತ್ತು.

ಎಂದಿನಂತೆ ಹಬ್ಬದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಸಾರ್ವಜನಿಕರು ಖರೀದಿಯಲ್ಲಿ ನಿರತರಾಗಿದ್ದರು. ನಗರದ ದೇವರಾಜ ಮಾರುಕಟ್ಟೆ, ಮಹಾತ್ಮಗಾಂಧಿ ರಸ್ತೆಯಲ್ಲಿರುವ ಮಾರುಕಟ್ಟೆ, ವಾಣಿವಿಲಾಸ ಮಾರುಕಟ್ಟೆ, ಮಂಡಿ ಮಾರುಕಟ್ಟೆ ಸೇರಿದಂತೆ ಪ್ರಮುಖ ಭಾಗಗಳಲ್ಲಿ ವ್ಯಾಪಾರ ಭರಾಟೆ ಜೋರಾಗಿತ್ತು. ನಗರ ಸೇರಿದಂತೆ ವಿವಿಧ ಭಾಗಗಳಿಂದ ಖರೀದಿಗಾಗಿ ಸಾರ್ವಜನಿಕರು ಮಾರುಕಟ್ಟೆಗೆ ಆಗಮಿಸಿದ್ದರಿಂದ ಜನಜಂಗುಳಿ ಉಂಟಾಗಿತ್ತು.

ಮಹಿಳೆಯರು ಗೌರಿ ಹಬ್ಬಕ್ಕೆ ಬೇಕಾದ ಹೂವು, ಹಣ್ಣು, ಅರಿಶಿನ-ಕುಂಕುಮ, ಬಳೆ, ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರೆ ಪುರುಷರು ಗೌರಿ-ಗಣೇಶ ಮೂರ್ತಿಗಳನ್ನು ಕೊಳ್ಳುತ್ತಿದ್ದರು. ಇನ್ನು ದೇವರಾಜ ಮಾರುಕಟ್ಟೆ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ದಟ್ಟಣೆ ಅಧಿಕವಾಗಿ ಸಂಚಾರಕ್ಕೆ ತೊಂದರೆಯಾಯಿತು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: