ದೇಶಪ್ರಮುಖ ಸುದ್ದಿ

 ಈ ತಿಂಗಳಲ್ಲಿ ಎರಡು ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ದೇಶ(ನವದೆಹಲಿ)ಸೆ.9:- ಮುಂದಿನ ವರ್ಷ ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿಯ ಸಿದ್ಧತೆಗಳು ಭರದಿಂದ ಸಾಗಿವೆ. ಯುಪಿ ಮಿಷನ್ ದೃಷ್ಟಿಯಿಂದ, ಪ್ರಧಾನಿ ನರೇಂದ್ರ ಮೋದಿ ಈ ತಿಂಗಳು ಎರಡು ಬಾರಿ ಯುಪಿಗೆ ಭೇಟಿ ನೀಡಲಿದ್ದಾರೆ. ಮಾಹಿತಿಯ ಪ್ರಕಾರ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 14 ರಂದು ಅಲಿಘರ್ ಮತ್ತು ಸೆಪ್ಟೆಂಬರ್ 26 ರಂದು ರಾಜಧಾನಿ ಲಕ್ನೋಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 14 ರಂದು ಅಲಿಘಡದಿಂದ ಉತ್ತರ ಪ್ರದೇಶ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅಲಿಗಢಕ್ಕೆ ಭೇಟಿ ನೀಡಲಿದ್ದಾರೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅವರು ಇಲ್ಲಿ ರಾಜ ಮಹೇಂದ್ರ ಪ್ರತಾಪಸಿಂಹ ವಿಶ್ವವಿದ್ಯಾಲಯದ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲದೆ   ಸಾರ್ವಜನಿಕ ಸಭೆಯನ್ನು ಕೂಡ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೆಪ್ಟೆಂಬರ್ 26 ರಂದು ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಲಿದ್ದಾರೆ. ಅಲ್ಲಿ  ಕಾನ್ಕ್ಲೇವ್  ನಲ್ಲಿ  ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ನಡೆಯಲಿದೆ. ಅರ್ಬನ್ ಕಾನ್ಕ್ಲೇವ್ ಅನ್ನು ವಸತಿ ಅಭಿವೃದ್ಧಿ ಸೇರಿದಂತೆ ಎರಡು ಇಲಾಖೆಗಳು ಜಂಟಿಯಾಗಿ ಆಯೋಜಿಸುತ್ತಿವೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಲ್ಲದೆ, ಸಿಎಂ ಯೋಗಿ ಮತ್ತು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಕೂಡ ಭಾಗವಹಿಸಲಿದ್ದಾರೆ. ಇದರೊಂದಿಗೆ ಸರ್ಕಾರದ ಹಲವು ಮಂತ್ರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: