ದೇಶಪ್ರಮುಖ ಸುದ್ದಿಮನರಂಜನೆ

ನಟ ರಜತ್ ಬೇಡಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು :  ಪ್ರಕರಣ ದಾಖಲು

ದೇಶ(ಮುಂಬೈ)ಸೆ.9:-   ಇತ್ತೀಚೆಗೆ  ಮುಂಬೈನ ಅಂಧೇರಿ ಪ್ರದೇಶದಲ್ಲಿ ಬಾಲಿವುಡ್ ನಟ ರಜತ್ ಬೇಡಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಗಾಯಗೊಂಡಿದ್ದರು. ಗಾಯಗೊಂಡ ವ್ಯಕ್ತಿ  ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಟ ರಜತ್ ಬೇಡಿ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಜತ್  ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಜತ್ ಬೇಡಿಯವರ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ವ್ಯಕ್ತಿ  ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಎನ್ ನಗರ ಪೊಲೀಸರು ಅವರ ವಿರುದ್ಧ ಐಪಿಸಿ ಸೆಕ್ಷನ್ 304-ಎ (ನಿರ್ಲಕ್ಷ್ಯ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: