ದೇಶಪ್ರಮುಖ ಸುದ್ದಿ

ಕೋವಿಡ್: ದೇಶದಲ್ಲಿ 27,176 ಹೊಸ ಪ್ರಕರಣ; 284 ಮಂದಿ ಸಾವು

ನವದೆಹಲಿ,ಸೆ.15-ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 27,176 ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,33,16,755ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದಾಗಿ 284 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,43,497 ಕ್ಕೆ ಏರಿದೆ. ಇನ್ನು ದೇಶದಲ್ಲಿ 351087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 38012 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32522171 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕಿನ ಶೇ.1.05 ರಷ್ಟಿದ್ದು, ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ಪ್ರಮಾಣವು ಶೇ.97.62 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಿನ್ನೆ ದೇಶದಲ್ಲಿ 16,10,829 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,15,690 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 75,89,12,277 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: