ಕರ್ನಾಟಕಪ್ರಮುಖ ಸುದ್ದಿ

ಮಂಗಳೂರು: ನಿಫಾ ಆತಂಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ವರದಿ ನೆಗೆಟಿವ್

ಮಂಗಳೂರು,ಸೆ.15-ನಿಫಾ ಸೋಂಕಿನ ಶಂಕೆಯಲ್ಲಿ ಇಲ್ಲಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿರುವ ಇವರು ಜ್ವರ ಮತ್ತು ಕೆಲವು ಲಕ್ಷಣ ಪತ್ತೆಯಾದ ಹಿನ್ನೆಲೆ ಕಾರವಾರದ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವ್ಯಕ್ತಿ, ಕಾರವಾರದಲ್ಲಿರುವ ಮನೆಗೆ ಬೈಕ್ ನಲ್ಲಿ ಬರುವಾಗ ಮಳೆಯಲ್ಲಿ ನೆನೆದುಕೊಂಡು ಬಂದಿದ್ದರು. ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿತ್ತು. ಗೂಗಲ್ ಮಾಡಿದ್ದ ಅವರು, ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ ಕಳುಹಿಸಲಾಗಿತ್ತು. ಸದ್ಯ ವೈದ್ಯಕೀಯ ಪರೀಕ್ಷೆಯ ವರದಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಕೈ ಸೇರಿದ್ದು, ನಿಫಾ ಸೋಂಕು ತಗುಲಿಲ್ಲ, ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: