ದೇಶಪ್ರಮುಖ ಸುದ್ದಿ

ವಾಯು ಮಾಲಿನ್ಯ ಆತಂಕ: ಈ ವರ್ಷವೂ ಪಟಾಕಿ ಮಾರಾಟ, ಬಳಕೆ ನಿಷೇಧಿಸಿದ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ,ಸೆ.15-ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಬಳಕೆ, ಮಾರಾಟಕ್ಕೆ ದೆಹಲಿ ಸರ್ಕಾರ ನಿಷೇಧ ಹೇರಿದೆ. ಇದರಿಂದಾಗಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿತ್ತು ಎಂದು ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ. ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರುವ ಮೂಲಕ ಜನರ ಜೀವವನ್ನು ಉಳಿಸಬಹುದಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ವ್ಯಾಪಾರಿಗಳು ಪಟಾಕಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧವನ್ನು ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವುಂಟಾಗಿತ್ತು. ಆದರೆ ಈ ಬಾರಿ ಸಂಪೂರ್ಣ ನಿಷೇಧ ಗಮನದಲ್ಲಿಟ್ಟುಕೊಂಡು ಯಾರೂ ಕೂಡಾ ಶೇಖರಣೆ ಮಾಡಬಾರದು ಎಂದು ವ್ಯಾಪಾರಿಗಳಿಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

 

Leave a Reply

comments

Related Articles

error: