ಕರ್ನಾಟಕಪ್ರಮುಖ ಸುದ್ದಿ

ಕಲ್ಯಾಣ ಕರ್ನಾಟಕ ಉತ್ಸವ ದಿನ: ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ; ಸಿಎಂ ಬಸವರಾಜ ಬೊಮ್ಮಾಯಿ

ಕಲಬುರ್ಗಿ,ಸೆ.17-`ಕಲ್ಯಾಣ ಕರ್ನಾಟಕ’ ಎಂದು ಈ ಭಾಗಕ್ಕೆ ಎಂದು ನಾಮಕರಣ ಮಾಡಿದ ಬಿ.ಎಸ್‌.ಯಡಿಯೂರಪ್ಪ ಅವರು ಇನ್ನೊಬ್ಬ `ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

ಶುಕ್ರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಹೈದರಾಬಾದ್‌ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್‌ ವಲ್ಲಭಭಾಯಿ ಪಟೇಲರು ಪ್ರಥಮ ಉಕ್ಕಿನ ಮನುಷ್ಯರಾದರೆ, ಕಲ್ಯಾಣ ಕರ್ನಾಟಕ ಎಂದು ಈ ಭಾಗಕ್ಕೆ ಎಂದು ನಾಮಕರಣ ಮಾಡಿದ ಬಿ.ಎಸ್‌. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ ಎಂದರು.

ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಹಲವಾರು ಕಾರ್ಯಕ್ರಮಗಳಿಗೂ ಅವರು ರೂವಾರಿಗಳಾಗಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ಜನರ ಜೀವನ ಮಟ್ಟ ಸುಧಾರಿಸುವ ಮೂಲಕ ಕಲ್ಯಾಣ ಕರ್ನಾಟಕ ಹೆಸರಿಗೆ ಸಾರ್ಥಕತೆ ತುಂಬುವ ಛಲದಿಂದ ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನಮ್ಮ ಈ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಸರ್ದಾರ್‌ ವಲ್ಲಭಭಾಯಿ ಪಟೇಲರು ಭಾರತವನ್ನು ರಿಪಬ್ಲಿಕ್‌ ದೇಶವನ್ನಾಗಿ ಮಾಡಿದ ಪ್ರಥಮ ನಾಯಕರು. ಅವರು ನಮಗೆಲ್ಲ ಆದರ್ಶರು. ಅವರು ತೋರಿಸಿರುವ ತತ್ವ- ಆದರ್ಶಗಳ ಅಡಿಯಲ್ಲಿ ಸ್ವತಂತ್ರ ಭಾರತವನ್ನು ನಾವು ಮುನ್ನಡೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಬಳಿಕ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಮೇಳಕ್ಕೆ ಚಾಲನೆ ನೀಡಿದರು.

 

Leave a Reply

comments

Related Articles

error: