ಪ್ರಮುಖ ಸುದ್ದಿಮೈಸೂರು

ಮೈಸೂರು ಜಿಲ್ಲೆಯಲ್ಲಿ ಒಂದೇ ದಿನ 1.05 ಲಕ್ಷ ಲಸಿಕೆ ವಿತರಣೆ

ವಿಶೇಷ ಕೋವಿಡ್ ಲಸಿಕೆ ಅಭಿಯಾನ

ಮೈಸೂರು, ಸೆ. 17:- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವಾದ ಇಂದು ಆಯೋಜಿಸಿದ್ದ ಕೋವಿಡ್ ವಿಶೇಷ ಲಸಿಕಾ ಅಭಿಯಾನದಲ್ಲಿ ಮೈಸೂರು ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲಾ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸಂಘಟಿಸಿದ ಅಧಿಕಾರಿಗಳು, ಲಸಿಕೆ ಹಾಕಿಸಿಕೊಂಡ ಸಾರ್ವಜನಿಕರಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಈ ಒಂದೇ ದಿನ ಸುಮಾರು 1.05 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕಲಾಗಿದ್ದು, ಜಿಲ್ಲೆಯಲ್ಲಿ ಇದುವರೆಗಿನ ಗರಿಷ್ಠ ಸಂಖ್ಯೆ ಇದಾಗಿದೆ. ಕೋವಿಡ್‌ನಿಂದ ಸುರಕ್ಷತೆ ಪಡೆಯುಲು ಇದು ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ಶೇ. 100 ರಷ್ಟು ಸಾಧನೆ ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ನಡೆದ ವಿಶೇಷ ಅಭಿಯಾನ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.

ಈ ವಿಶೇಷ ಅಭಿಯಾನದಲ್ಲಿಯೂ ಸಹ ಲಸಿಕೆ ಹಾಕಿಸಿಕೊಳ್ಳಲಾಗದೆ ಉಳಿದವರು ಚಿಂತಿಸುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಡೋಸ್ ಲಸಿಕೆ ಲಭ್ಯವಿದೆ. ಅಂತಹವರು ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ

Leave a Reply

comments

Related Articles

error: