ದೇಶಪ್ರಮುಖ ಸುದ್ದಿ

ಪಂಜಾಬ್ ನೂತನ ಸಿಎಂ ಚರಣ್ ಜಿತ್ ಸಿಂಗ್ ಚನ್ನಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ,ಸೆ.20-ಪಂಜಾಬ್ ನ ನೂತನ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ, ಜನರ ಒಳಿತಿಗಾಗಿ ಗಡಿ ರಾಜ್ಯದ ಹೊಸ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಕೆಲಸವನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.

ಚಂಡೀಘಡದ ರಾಜಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಇಬ್ಬರು ಸಂಪುಟ ಸಚಿವರೊಂದಿಗೆ ಚರಣ್ ಜಿತ್ ಸಿಂಗ್ ಚನ್ನಿ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: