ಮೈಸೂರು

ದಸರಾ ಸಮೀಪಿಸುತ್ತಿರುವ ಹಿನ್ನೆಲೆ : ರೌಡಿ ಪರೇಡ್ ನಡೆಸಲಿರುವ ಕಮೀಷನರ್

ಮೈಸೂರು,ಸೆ.24:- ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲು ಇಂದು ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ಅವರು ರೌಡಿ ಪರೇಡ್ ನಡೆಸಲಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ಅಪರಾಧ ವಿಭಾಗದ ಪೊಲೀಸರು ನಗರದ ಹಲವೆಡೆ ಇರುವ ರೌಡಿ ಶೀಟರ್ ಮನೆಗಳಿಗೆ ತೆರಳಿ ನೋಟೀಸ್ ನೀಡಿದ್ದು, ಇಂದು ಸಂಜೆ 5ಗಂಟೆಗೆ ಸಿಎಆರ್ ಗ್ರೌಂಡ್ ನಲ್ಲಿ ನಡೆಯಲಿರುವ ರೌಡಿ ಪರೇಡ್ ಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹಾಜರಾಗದಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.

ನಗರದಲ್ಲಿ ಸರಗಳ್ಳತನ, ಮನೆಗಳ್ಳತನ, ದರೋಡೆ ಕೃತ್ಯಗಳು ಸೇರಿದಂತೆ ಇನ್ನಿತರ ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸರು ಪಣ ತೊಟ್ಟಿದ್ದಾರೆ.

ಮೈಸೂರು ನಗರದಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಇವುಗಳಿಗೆ ಕಡಿವಾಣ ಹಾಕಲು ಮೈಸೂರು ಪೊಲೀಸರು  ಹೆಚ್ಚು ಅಲರ್ಟ್ ಆಗಿದ್ದಾರೆ.  ರೌಡಿ ಪರೇಡ್ ನಲ್ಲಿಡಿಸಿಪಿಗಳಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ ಕೂಡ ಭಾಗವಹಿಸಿ ರೌಡಿಗಳಿಗೆ ಎಚ್ಚರಿಕೆಯ ಮಾತುಗಳನ್ನು ಹೇಳಲಿದ್ದಾರೆಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: