ಮೈಸೂರು

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ : ರೋಗಿ ಸಾವು

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದ ಹಿನ್ನಲೆಯಲ್ಲಿ  ಆಸ್ಪತ್ರೆಯಲ್ಲೇ ರೋಗಿ ಸಾವನ್ನಪ್ಪಿದ ಘಟನೆ ಹುಣಸೂರಿನಲ್ಲಿ ನಡೆದಿದೆ.

ಮೃತನನ್ನುಬಿಳಿಕೆರೆ ನಿವಾಸಿ  ಅಕ್ರುದ್ದೀನ್ (30) ಎಂದು ಗುರುತಿಸಲಾಗಿದೆ. ಈತನಿಗೆ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಹುಣೂಸೂರು ತಾಲೂಕು ಬಿಳಿಕೆರೆ  ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ರೋಗಿ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ಮುಂದೆ ಮೃತನ ಸಂಬಂಧಿಕರು  ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನೆ ನಡೆಸಿದರು. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: