ಕರ್ನಾಟಕಪ್ರಮುಖ ಸುದ್ದಿ

ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ

ರಾಜ್ಯ(ಮಡಿಕೇರಿ) ಸೆ.25:-ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್ 27 ಮತ್ತು 29 ರಂದು ಎಸ್ಸೆಎಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಪಾವಿತ್ರತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ 200 ಮೀ. ಸುತ್ತಳತೆಯ ಪ್ರದೇಶವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಲಾಗಿರುತ್ತದೆ.
ಎಸ್ಸೆಎಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ವ್ಯಾಪ್ತಿಯನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಮುಚ್ಚಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: