ಕರ್ನಾಟಕನಮ್ಮೂರುಪ್ರಮುಖ ಸುದ್ದಿಮೈಸೂರು

ಆಹಾರ ಮೇಳಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ

dasara15-webಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಉತ್ಸವ ಪ್ರಯುಕ್ತ ಹಮ್ಮಿಕೊಂಡ ಆಹಾರ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಕಾವೇರಿಯ ಗಲಭೆಯಿಂದಾಗಿ ದಸರಾ ಕಾರ್ಯಕ್ರಮದ ಪಟ್ಟಿಯನ್ನು ಕಡಿಮೆ ಮಾಡಲಾಗಿದೆ. ಇದರಿಂದ ಸರಳ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಸಂವಿಧಾನದ ಆಹಾರ ಕಾಯ್ದೆ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯನ್ನು ನಡೆಸಿದ್ದಾರೆ ಎಂದು ತಿಳಿಸಿದರು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಆಸಕ್ತರು ಮಳಿಗೆಗಳನ್ನು ತೆರೆದಿದ್ದಾರೆ ಎಂದರು. ಬುಡಕಟ್ಟು ಆಹಾರ ದರ್ಶಿನಿ, ಸಿರಿಧಾನ್ಯ, ಹಸಿರು ಆಹಾರ ದರ್ಶನ, ಸವಿಭೋಜನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು.

ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ಜಿಲ್ಲಾಧಿಕಾರಿ ರಂದೀಪ್, ಶಾಸಕರಾದ ಸೋಮಶೇಕರ್, ವಾಸು ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: