ಮೈಸೂರು

ನಂಜನಗೂಡು ಉಚ್ಚಗಣಿ ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆ

ಮೈಸೂರು,ಸೆ.27:- ಮೈಸೂರು ಜಿಲ್ಲೆಯ ನಂಜನಗೂಡು ಉಚ್ಚಗಣಿ ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಲಾಗಿದೆ.

ಉಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಉಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು. ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ದೇಗುಲ ತೆರವು ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ತಹಶೀಲ್ದಾರ್ ತಲೆದಂಡವಾಗಿದೆ.
ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಮೈಸೂರು ಜಿಲ್ಲಾಧಿಕಾರಿ ಮತ್ತು ನಂಜನಗೂಡು ತಹಶೀಲ್ದಾರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ದೇಗುಲ ತೆರವು ಮಾಡಿದ ವಿಚಾರಕ್ಕೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದೀಗ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Leave a Reply

comments

Related Articles

error: