ಮೈಸೂರು

ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜೆ: ಅರಮನೆ ವೀಕ್ಷಣೆಗೆ ನಿರ್ಬಂಧ

ಮೈಸೂರು ಸೆ. 27:- ಮೈಸೂರು ಅರಮನೆಯಲ್ಲಿ ದಸರಾ-2021ರ ಪ್ರಯುಕ್ತ ಮೈಸೂರು ರಾಜಮನೆತನದವರು ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸುವುದರಿಂದ ಅಕ್ಟೋಬರ್ 1, 7, 14, 15, 31 ರಂದು ಅರಮನೆ ವೀಕ್ಷಣೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಕ್ಟೋಬರ್ 01 ಶುಕ್ರವಾರ ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶವಿರುವುದಿಲ್ಲ.
ಅಕ್ಟೋಬರ್07ರಂದು ಗುರುವಾರ ಖಾಸಗಿ ದರ್ಬಾರ್‍ನಲ್ಲಿ ರಾಜವಂಶಸ್ಥರ ಧಾರ್ಮಿಕ ಪೂಜೆಯ ಪ್ರಯುಕ್ತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪ್ರವೇಶವಿರುವುದಿಲ್ಲ.
ಅಕ್ಟೋಬರ್14ರಂದು ಗುರುವಾರ ಆಯುಧ ಪೂಜೆ ಪ್ರಯುಕ್ತ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪ್ರವೇಶವಿರುವುದಿಲ್ಲ.
ಅಕ್ಟೋಬರ್ 15ರಂದು ಶುಕ್ರವಾರ ವಿಜಯದಶಮಿಯ ಪ್ರಯುಕ್ತ ಸಂಪೂರ್ಣ ದಿನ ಪ್ರವೇಶವಿರುವುದಿಲ್ಲ. ಹಾಗೂ ಅಕ್ಟೋಬರ್ 31ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಸಿಂಹಾಸನ ವಿಸರ್ಜನೆ ಪ್ರಯುಕ್ತ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: