ಕರ್ನಾಟಕಪ್ರಮುಖ ಸುದ್ದಿ

ಹಾನಗಲ್, ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಅಕ್ಟೋಬರ್ 30ಕ್ಕೆ ಉಪಚುನಾವಣೆ

ಬೆಂಗಳೂರು,ಸೆ.28- ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿ ರಾಷ್ಟ್ರೀಯ ಚುನಾವಣಾ ಆಯೋಗ ಆದೇಶಿಸಿದೆ.

ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30 ಚುನಾವಣೆ ನಡೆಯಲಿದ್ದು, ನೆವಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ಸಿಎಂ ಉದಾಸಿ ಅವರು ಇತ್ತೀಚೆಗೆ ನಿಧನರಾಗಿದ್ದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯ ಉಪಚುನಾವಣೆಯಾದ ಕಾರಣ ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿರಲಿದೆ.

ಜೆಡಿಎಸ್ ಶಾಸಕ ಎಂ.ಸಿ.ಮನಗುಳಿ ನಿಧನದಿಂದ ತೆರವಾಗಿದ್ದ ಸಿಂದಗಿ ಕ್ಷೇತ್ರದಲ್ಲೂ ಉಪ ಚುನಾವಣೆ ಘೋಷಣೆಯಾಗಿದೆ.

ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಉದಾಸಿ ಅವರ ಪುತ್ರ ಸಂಸದರಾದ ಶಿವಕುಮಾರ ಉದಾಸಿ ಅವರನನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ.

ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದೆ. ಇವರೆಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

Leave a Reply

comments

Related Articles

error: