ಕರ್ನಾಟಕಪ್ರಮುಖ ಸುದ್ದಿ

ಅ.2: ಸಮಾಜ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ

ರಾಜ್ಯ(ಮಡಿಕೇರಿ),ಅ.1:- ಸಮಾಜ  ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಅಕ್ಟೋಬರ್, 02 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಕ್ಟೋಬರ್, 02 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಮಹೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ಮಡಿಕೇರಿ ದಸರಾ ಆಚರಣೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: