ಕರ್ನಾಟಕಪ್ರಮುಖ ಸುದ್ದಿ

ಮಹಿಳೆಯರನ್ನು ರಕ್ಷಿಸುವ ಕಡೆ ಗಮನ ಹರಿಸುವಂತೆ ಎಚ್ಚರಿಸಿದ ಮಹಿಳಾ ಕಾಂಗ್ರೆಸ್

ರಾಜ್ಯ(ಬೆಂಗಳೂರು),ಅ.2:- ಮೌರ್ಯ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ರಾತ್ರಿ 11ಗಂಟೆಯಿಂದ ಮಧ್ಯರಾತ್ರಿ 01 ಗಂಟೆಯವರೆಗೆ ಗಾಂಧಿ ನಮನವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರಾದ ಡಾ.ಪುಷ್ಪ ಅಮರನಾಥ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಶಾಸಕರಾದ  ಸೌಮ್ಯ ರೆಡ್ಡಿ, ನಾಯಕಿಯರಾದ  ತಬು ದಿನೇಶ್ ಗುಂಡೂರಾವ್,  ಕುಸುಮಾ ಹನುಮಂತರಾಮಪ್ಪ, ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ, ಬೆಂಗಳೂರು ಉತ್ತರ-ದಕ್ಷಿಣ ಹಾಗು ಬೆಂಗಳೂರು ಕೇಂದ್ರ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ರಾಜ್ಯ ಪದಾಧಿಕಾರಿಗಳು ಮತ್ತು ಬ್ಲಾಕ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪುಷ್ಪ ಅಮರನಾಥ್ , ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಅವರ ಜನ್ಮದಿನವನ್ನು ರಾಷ್ಟ್ರಾದ್ಯಂತ ವಿಶೇಷವಾಗಿ ಆಚರಣೆ ಮಾಡುತ್ತೇವೆ. ಮಹಿಳೆಯರು ಮಧ್ಯರಾತ್ರಿ ರಸ್ತೆಯಲ್ಲಿ ಸ್ವಂತಂತ್ರರಾಗಿ ಓಡಾಡಿದ ದಿನದಂದು ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನವೆಂದು ಗಾಂಧೀಜಿ ಅವರು ಯಾವಾಗಲೂ ಹೇಳುತ್ತಿದ್ದರು. ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ, ಇನ್ನು ಮುಂತಾದ ದೌರ್ಜನ್ಯಗಳು ಅತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ.
ದೇಶವನ್ನು ರಾಮ ರಾಜ್ಯವನ್ನಾಗಿ ಮಾಡುವ ಗಾಂಧೀಜಿ ಅವರ ಕನಸನ್ನು ನನಸು ಮಾಡುವಂತೆ ಬಿಜೆಪಿ ಸರ್ಕಾರಕ್ಕೆ ಎಚ್ಚರಿಸುತ್ತ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಮಹಿಳೆಯರ ರಕ್ಷಣೆ ಕಡೆ ಗಮನ ಹರಿಸುವಂತೆ ಬಿಜೆಪಿ ಯನ್ನು ಎಚ್ಚ ರಿಸುವ ಸಲುವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್  ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ಮಾಲೆಯನ್ನು ಅರ್ಪಿಸಿ, ಮೋಂಬತ್ತಿಯನ್ನು ಹಚ್ಚಿ, ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸುತ್ತಾ, ಮಹಿಳಾ ವಿರೋಧಿ ಕತ್ತಲೆಯ ವಿರುದ್ಧ ಗಾಂಧಿ ತತ್ವವನ್ನು ಅರಿತು ಸತ್ಯದೆಡೆಗೆ ನಡೆಯಬೇಕು ಎಂದು ಮಧ್ಯರಾತ್ರಿ ಪಂಜನ್ನು ಹಿಡಿದು ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಂಸತ್ತಿಗೆ ಈಗ ಪಂಚಾಯತ್‌ಗಳಲ್ಲಿ ಮಹಿಳಾ ಪ್ರಾತಿನಿಧ್ಯದ ವಿಷಯದ ಕುರಿತು ಮಾತನಾಡಿದ ಶಾಸಕಿ ಸೌಮ್ಯ ರೆಡ್ಡಿ, ಮಹಿಳೆಯರಿಗೆ 33% ಮೀಸಲಾತಿಯ ಅಗತ್ಯವಿದೆ ಮತ್ತು ನಾವು 50% ಮೀಸಲಾತಿಗಾಗಿ ಹೋರಾಡಬೇಕು ಏಕೆಂದರೆ ಮಹಿಳೆಯರ ಜನಸಂಖ್ಯೆ ಹೆಚ್ಚಾಗಿರುವುದರಿಂದ, ಮಹಿಳಾ ಜನಸಂಖ್ಯೆಯು ಒಟ್ಟು ಜನಸಂಖ್ಯೆಯ 20% ರಲ್ಲಿ 50% ರಷ್ಟಿದೆ. ಭಾರತ ಮತ್ತು ಮಹಿಳಾ ಸುರಕ್ಷತೆ ಬಹಳ ಮುಖ್ಯ. ನಾವು ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಬೇಕು ಇದರಿಂದ ಮಹಿಳೆಯರಿಗೆ ರಕ್ಷಣೆಯನ್ನು ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ಕುರಿತು ಮಾತನಾಡಿದ ನಾಯಕಿ  ತಬು ದಿನೇಶ್ ಗುಂಡೂ ರಾವ್ , ಎಲ್ಲಾ ವಿಭಾಗಗಳಲ್ಲೂ ಮಹಿಳೆಯರು ಕಾರ್ಯ ನಿರ್ವಹಿಸಬೇಕು. ದೇಶದ ಅಭಿವೃದ್ಧಿ ಮಹಿಳೆಯರಿಂದಲೇ ಸಾಧ್ಯ ಎಂದು ಹೇಳಿದ ಮಹಾತ್ಮ ಗಾಂಧಿ ಯವರ ಕನಸನ್ನು ನನಸು ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅತಿ ಹೆಚ್ಚು ಮಹಿಳೆಯರು ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಾತ್ಮ ಗಾಂಧೀಜಿಯವರು ದೇಶದ ಏಕತೆ ಹಾಗು ಅಹಿಂಸೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ. ಗಾಂಧಿಯನ್ನು ಕೊಂದ ಗೋಡ್ಸೆ ಯನ್ನು ಹೊಗಳುತ್ತಿರುವ ಸರ್ಕಾರವನ್ನು ಇಂದು ನಾವು ನೋಡುತ್ತಿದ್ದೇವೆ. ಹೆಣ್ಣುಮಕ್ಕಳು ರಸ್ತೆಗೆ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ಬಾರಿಯೂ ಮಹಿಳೆ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ಶಾಸಕರು-ಸಚಿವರು ಬೇಜಾವಾಬ್ಧಾರಿ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಇಂತಹ ಬೇಜವಾಬ್ದಾರಿ ಸರ್ಕಾರವನ್ನು ನಾವು ಕಿತ್ತೊಗೆಯಬೇಕೆಂದು ನಾಯಕಿ ಕುಸುಮಾ ಹನುಮಂತರಾಯಪ್ಪ ಹೇಳಿದರು. (ಜಿ.ಕೆ.ಎಸ್.ಎಚ್)

Leave a Reply

comments

Related Articles

error: