
ದೇಶಪ್ರಮುಖ ಸುದ್ದಿ
ಇಂದು ಲಕ್ನೋಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ದೇಶ(ನವದೆಹಲಿ)ಅ.5: – ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಖನೌಗೆ ಭೇಟಿ ನೀಡುತ್ತಿದ್ದಾರೆ.
ಇಲ್ಲಿನ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ 75ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಅಮೃತ್ ಮಹೋತ್ಸವದ ಅಡಿಯಲ್ಲಿ ಆಯೋಜಿಸಲಾಗಿರುವ ‘ನ್ಯೂ ಅರ್ಬನ್ ಇಂಡಿಯಾ: ಟ್ರಾನ್ಸ್ಫಾರ್ಮಿಂಗ್ ದಿ ಅರ್ಬನ್ ಲ್ಯಾಂಡ್ಸ್ಕೋಪ್’ ಸಮ್ಮೇಳನ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮೋದಿ ಅವರು ಚಾಲನೆ ನೀಡಿ, ಅಯೋಧ್ಯೆ ಅಭಿವೃದ್ಧಿಯ ಮಾಸ್ಟರ್ ಕ್ಲಾನ್ ರಿವ್ಯೂವ್ ಮಾಡಲಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ನೀಡಿರುವ ಮಾಹಿತಿ ಪ್ರಕಾರ ಮೋದಿ ಅವರ ಭೇಟಿ ವೇಳೆ ಪ್ರಧಾನಮಂತ್ರಿ ಆವಾಸ್ ಯೋಜನೆ-ಅರ್ಬನ್ ಅಡಿಯಲ್ಲಿ ನಿರ್ಮಿಸಲಾದ ಮನೆಗಳ ಕೀಗಳನ್ನು 75 ಸಾವಿರ ಫಲಾನುಭವಿಗಳಿಗೆ ಹಂಚಿಕೆ ಮಾಡಲಿದ್ದಾರೆ. ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ 75 ಜಿಲ್ಲೆಗಳ 75 ಸಾವಿರ ಫಲಾನುಭವಿಗಳಿಗೆ ಹಂಚಿಕೆ ಮಾಡಲಿದ್ದಾರೆ. ಜೊತೆಗೆ ಈ ಎಲ್ಲಾ ಫಲಾನುಭವಿಗಳ ಜೊತೆ ಮೋದಿ ಅವರು ಸಂವಾದ ನಡೆಸಲಿದ್ದಾರೆ.
75 ಎಲೆಕ್ಟ್ರಿ ಕ್ ಬಸ್ ಗಳ ಲೋಕಾರ್ಪಣೆ
ಉತ್ತರ ಪ್ರದೇಶದ 75 ನಗರಾಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಲಖನೌ,ಕಾನ್ಸುರ, ವಾರಾಣಸಿ, ಪ್ರಯಾಗರಾಜ್, ಗೋರಖ್ಪುರ ಸೇರಿದಂತೆ ಒಟ್ಟು 7 ನಗರಗಳಿಗೆ ಒಟ್ಟು 75 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ.
ಎಕ್ಸ್ಪೋದ ಮೂರು ಪ್ರದರ್ಶನಗಳಿಗೆ ಮೋದಿ ಭೇಟಿ
ನೀಡಲಿದ್ದಾರೆ. ಇದೇ ವೇಳೆ ಅಂಬೇಡ್ಕರ್ ವಿಶ್ವವಿದ್ಯಾಲಯಕ್ಕೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ವಸತಿ
ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ,
ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಲಿದ್ದಾರೆ. (ಏಜೆನ್ಸಿಸ್, ಎಸ್.ಎಚ್)