ಕರ್ನಾಟಕಪ್ರಮುಖ ಸುದ್ದಿಮೈಸೂರು

ಇಂದು ಮೈಸೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು,ಅ.6:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ 4ಗಂಟೆಗೆ ರಸ್ತೆಯ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ.

ಮೈಸೂರಿನ ವಿದ್ಯಾರಣ್ಯ ಪುರಂನ 6ನೇ ಕ್ರಾಸ್‌ ನಲ್ಲಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎದುರಿನ ಉದ್ಯಾನವನದಲ್ಲಿ ಮೋದಿ ಯುಗ್ ಉತ್ಸವ-ಅಂತ್ಯೋದಯ ಸಮಾರಂಭ ದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿಗಳು ಸಂಜೆ 6 ಗಂಟೆಗೆ ಕೆಆರ್‌ಎಸ್‌ ಗೆ ತೆರಳಿ ರಾತ್ರಿ ವಾಸ್ತವ್ಯ ಹೂಡುವರು. ಅ.7ರಂದು ಬೆಳಿಗ್ಗೆ 7.45 ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದು 2021ರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು, ಬೆಳಿಗ್ಗೆ 10.40 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳುವರು.

ಮಧ್ಯಾಹ್ನ 3.30 ಕ್ಕೆ ಚಾಮರಾಜನಗರ ಜಿಲ್ಲೆ, ಯಡಾಪುರ ಗ್ರಾಮದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯದ ಬೋಧನಾ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ   ಅವರು, ಅಂದು ಸಂಜೆ 6 ಗಂಟೆಗೆ ಮೈಸೂರಿನ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ನಂತರ ಬೆಂಗಳೂರಿಗೆ ಹಿಂದಿರುಗಲಿದ್ದಾರೆಂದು  ಪ್ರಕಟಣೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: