
ದೇಶಪ್ರಮುಖ ಸುದ್ದಿ
ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 93.94 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ನವದೆಹಲಿ,ಅ.7-ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 93.94 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 93.94 (93,94,54,695) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 7,64,75,975 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 92,63,68,608 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಏಜೆನ್ಸೀಸ್, ಎಂ.ಎನ್)