
ಕರ್ನಾಟಕಪ್ರಮುಖ ಸುದ್ದಿ
ಶಿರಾಡಿ ಘಾಟ್ನಲ್ಲಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್: ಅನಿಲ ಸೋರಿಕೆ, ಬದಲಿ ಮಾರ್ಗದಲ್ಲಿ ವಾಹನ ಸಂಚಾರ
ಸಕಲೇಶಪುರ,ಅ.7-ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಇದರಿಂದ ಅನಿಲ ಸೋರಿಕೆಯಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್ನಲ್ಲಿ ಕೆಲ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ತದನಂತರ ಘಟನೆ ನಡೆದ ಸ್ಥಳ ಹೊರತುಪಡಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಟ್ಯಾಂಕರ್ ನಲ್ಲೇ ಸಿಲುಕಿದ್ದ ಚಾಲಕನನ್ನು ಕ್ರೇನ್ ಬಳಸಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.