Uncategorized

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: 9 ಮಂದಿ ಸಾವು; ಹಲವರಿಗೆ ಗಾಯ

ಲಕ್ನೋ,ಅ.7- ಡಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಸಾವನ್ನಪ್ಪಿ, 27 ಮಂದಿ ಗಾಯಗೊಂಡಿರುವ ಘಟನೆ ಲಕ್ನೋ ಗಡಿ ಭಾಗದ ಬಾರಾಬಂಕಿ ಜಿಲ್ಲೆಯ ದೇವ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುರಿಯಾ ಗ್ರಾಮದ ಬಳಿ ನಡೆದಿದೆ.

ಬಸ್ ದೆಹಲಿಯಿಂದ ಬಹ್ರೈಚ್ ಗೆ ಹೋಗುತ್ತಿದ್ದಾ ಅಪಘಾತ ಸಂಭವಿಸಿದ್ದು, ಬಸ್​ನಲ್ಲಿ ಸುಮಾರು 70 ಮಂದಿ ಇದ್ದರು ಎನ್ನಲಾಗುತ್ತಿದೆ. ಟ್ರಕ್ ನಲ್ಲಿ ಮರಳನ್ನು ಸಾಗಿಸಲಾಗುತ್ತಿತ್ತು.

ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದು, ಗಾಯಗೊಂಡವರು ಮತ್ತು ಮೃತ ದೇಹಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಇನ್ನು ತೀವ್ರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಬೆಸರ ವ್ಯಕ್ತಪಡಿಸಿದ್ದಾರೆ ಹಾಗೂ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜೊತೆಗೆ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: