ಮೈಸೂರು

ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಗೃಹಿಣಿಯೋರ್ವರು  ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಸರಸ್ವತಿಪುರಂ ನಿವಾಸಿ ಶೃತಿ(27) ಎಂದು ಗುರುತಿಸಲಾಗಿದೆ. ಸೋಮವಾರ ನೀರು ಕಾಯಿಸಲು ಸೌದೆ ಒಲೆಗೆ ಸೀಮೆಎಣ್ಣೆ ಹಾಕುತ್ತಿದ್ದ ವೇಳೆ ಶೃತಿ ಅವರ ಮೈಗೆ ಬೆಂಕಿ ಹೊತ್ತಿಕೊಂಡಿತ್ತು.  ತೀವ್ರ ಸುಟ್ಟಗಾಯಗಳಿಂದ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: