ಮೈಸೂರು

ಮುಂದುವರಿದ ರೈತರ ಆತ್ಮಹತ್ಯೆ ಸರಣಿ

ಹಾಸನ: ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ಸಾಲದ ಬಾಧೆ ತಾಳಲಾರದೇ  ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಮೃತರನ್ನು ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಸೋಮನಾಥಹಳ್ಳಿಯ ಮದ ಚಿಕ್ಕೇಗೌಡ ( 44) ಮನೆಯಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೋರ್ವರು ಬಾಗೂರು ಬ್ಯಾಡರಹಳ್ಳಿ ಗ್ರಾಮದ ರಾಮಯ್ಯ ( 41) ತನ್ನ ಹೊಲದಲ್ಲಿರುವ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಜಮೀನಿನಲ್ಲಿ ಹಾಕಿದ್ದ ಬೆಳೆ ನಷ್ಟವಾದ ಪರಿಣಾಮ ಬ್ಯಾಂಕ್ , ಕೈ ಸಾಲ ಮರುಪಾವತಿಸಲಾಗಿಲ್ಲ. ಇದರಿಂದ  ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ತಿಳಿದು ಬಂದಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: