ಕರ್ನಾಟಕಪ್ರಮುಖ ಸುದ್ದಿ

ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ

ಉಡುಪಿ,ಅ.13- ಉಡುಪಿಯ ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಲಾನ್ಯಾಸ ನೆರವೇರಿಸಿದರು.

ಅಲ್ಲದೆ, ಕಾಲೇಜಿನ ಗಣಕ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಹೊಸ ವಿಜ್ಞಾನ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅದಮಾರು ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವಪ್ರಿಯ ತೀರ್ಥರು, ಇಂಧನ ಸಚಿವ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ

ಉಡುಪಿ ಜಿಲ್ಲೆಯ ಕುಂತಲ ನಗರದಲ್ಲಿ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 6.36 ಕಿ.ಮೀ ಉದ್ದದ ರಸ್ತೆಯನ್ನು 4.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಯೋಜನೆ ಇದಾಗಿದೆ.

ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಗೆ ಚಾಲನೆ

ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ `ಪ್ರಧಾನಮಂತ್ರಿ ಗತಿಶಕ್ತಿ’ ಯೋಜನೆಗೆ ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಅವರು ಉಡುಪಿಯ ಕಾಪುವಿನಿಂದ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

comments

Related Articles

error: