ಮೈಸೂರು

ನಾಳೆ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಉದ್ಘಾಟನಾ ಸಮಾರಂಭ

ಮೈಸೂರು,ಅ.16:-ಸಾರ್ವಜನಿಕ ಸಹಕಾರ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಹಾಗೂ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನಲ್ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಎಂಬಿಎ ಅಧ್ಯಯನ ವಿಭಾಗದ ಬಹದ್ದೂರ್ ಇನ್ಸಟಿಟ್ಯೂಟ್ ಸಭಾಂಗಣದಲ್ಲಿ ನಾಳೆ(17/10/2021) ಬೆಳಿಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಪಿ.ಎಫ್ ಡಬ್ಲ್ಯೂ ಸಿಕೆಯ ಕಾರ್ಯದರ್ಶಿ ಪ್ರಕಾಶ್ ಮಾತನಾಡಿ   ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಓಯಿಸ್ಕಾ ಬೆಂಗಳೂರು ವಲಯ ಅಧ್ಯಕ್ಷರಾದ ಕೆ.ಅಮರನಾರಾಯಣ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಮಂಡೆಕುಟ್ಟದ ಪವಿತ್ರ, ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಲ್ಲಪ್ಪ ರೆಡ್ಡಿ, ವನ್ಯಜೀವಿ ಛಾಯಾಗ್ರಾಹಕ ಕೃಪಾಕರ ಸೇನಾನಿ, ಮಲೆ ಮಹದೇಶ್ವರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ   ಏಡುಕೊಂಡಲ, ಭೂವಿಜ್ಞಾನದ ಪ್ರಾಧ್ಯಾಪಕ ಡಾ.ಪಿ.ಮಾದೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಿ.ಎಫ್ ಡಬ್ಲ್ಯೂ ಸಿಕೆ ಸಿಇಒ ನವೀನ್ ನಿಶ್ಚಲ್, ಅಧ್ಯಕ್ಷ ಜಾನ್ ಪೀಟರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: