ಕ್ರೀಡೆದೇಶಪ್ರಮುಖ ಸುದ್ದಿ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ನೇಮಕ !

ದೇಶ(ನವದೆಹಲಿ)ಅ.16 :- ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್   ಅವರನ್ನು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್  ಆಗಿ ನೇಮಕ ಮಾಡಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಹಾಲಿ ಕೋಚ್ ರವಿ ಶಾಸ್ತ್ರಿ   ಅವರ ಅವಧಿ ಸಮಾಪ್ತಿಗೊಂಡ ಬಳಿಕ ದ್ರಾವಿಡ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್   ಮುಗಿದ ಬೆನ್ನಲ್ಲೇ   ಭಾರತದ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಆ ಬಳಿಕ ದ್ರಾವಿಡ್ ಅವರು ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಆದರೆ  ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ   ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಟಿ20 ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನವೆಂಬರ್‌ ನಲ್ಲಿ ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿರುವುದು ಬಹುತೇಕ ಖಚಿತವಾಗಿದೆ ಎಂದು ‘ಇಎಸ್‌ಪಿಎನ್‌ ಕ್ರಿಕ್ ಇನ್ಫೊ’ ಕೂಡ ವರದಿ ಮಾಡಿದೆ.

ಟಿ20 ವಿಶ್ವಕಪ್ ನಂತರ ಪ್ರಸ್ತುತ ಕೋಚ್ ರವಿಶಾಸ್ತ್ರಿ ಮತ್ತು ಅವರ ಸಹಾಯಕ ಸಿಬ್ಬಂದಿಯ ಅಧಿಕಾರದ ಅವಧಿ ಕೊನೆಗೊಳ್ಳುವುದು ಗಮನಾರ್ಹವಾಗಿದೆ. ಟಿ20 ವಿಶ್ವಕಪ್ ನಂತರ ಮೂರು ದಿನಗಳ ನಂತರ ನವೆಂಬರ್ 17ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧ ತವರಿನ ಸರಣಿಗೆ ರಾಹುಲ್ ದ್ರಾವಿಡ್ ತಂಡದ ಉಸ್ತುವಾರಿ ವಹಿಸಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

 

Leave a Reply

comments

Related Articles

error: