ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ “ನೀ ಸಿಗೋವರೆಗೂ” ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ರಾಜ್ಯ(ಬೆಂಗಳೂರು)ಅ.16:-  ಹ್ಯಾಟ್ರಿಕ್ ಹೀರೋ  ಶಿವರಾಜಕುಮಾರ್ ಅಭಿನಯದ “ನೀ ಸಿಗೋವರೆಗೂ” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಶೀಘ್ರದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಯುಎಸ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಶಿವರಾಜ್ ಕುಮಾರ್ ಈ ಚಿತ್ರದಲ್ಲಿ ಆರ್ಮಿ ಆಫೀಸರ್ ಆಗಿ  ಕಾಣಿಸಿಕೊಂಡಿದ್ದಾರೆ.

ನ್ಯೂ ಲುಕ್ ದಸರಾದ ಶುಭ ಸಂದರ್ಭದಲ್ಲಿ ಅನಾವರಣಗೊಂಡಿದೆ. ಇದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124 ನೇ ಚಿತ್ರವೂ ಹೌದು. ಭಾವನಾತ್ಮಕ ಪ್ರೇಮಕಥಾಹಂದರದ ಈ ಚಿತ್ರವನ್ನು ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದು,    ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ನರಾಲ ಶ್ರೀನಿವಾಸ್ ರೆಡ್ಡಿ, ಶ್ರೀಕಾಂತ್ ಧೂಲಿಪುಡಿ ಹಾಗೂ ಸ್ವಾತಿ ವನಪಲ್ಲಿ  ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.    ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು  ‘ಕುಡಿಪುಡಿ’ ವಿಜಯ್ ಕುಮಾರ್.  ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ “ನೀ ಸಿಗೋವರೆಗೂ” ಚಿತ್ರ ನಿರ್ಮಾಣವಾಗಲಿದೆ.

Leave a Reply

comments

Related Articles

error: