ಮೈಸೂರು

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮುಂದೂಡಿಕೆ

ಮೈಸೂರು, ಅ. 16:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2020-21ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವನ್ನು ದಿನಾಂಕ21-10-2021 ರಿಂದ 23-10-2021ರವರೆಗೆ ದಾವಣಗೆರೆಯಲ್ಲಿ ಸಂಘಟಿಸಲು ತೀರ್ಮಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಕ್ರೀಡಾಕೂಟವನ್ನು ಮುಂದೂಡಿ, ಅಕ್ಟೋಬರ್ 22ರಿಂದ 24ರವರೆಗೆÉ ನಡೆಸಲು ತೀರ್ಮಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆ ದಿನಾಂಕ 12-02-2021 ಮತ್ತು 13-02-2021 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸಲಾದ 2020-21ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾಮಟ್ಟದ ಕ್ರೀಡಾಕೂಟದ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಗುರುತಿನ ಚೀಟಿಗಳನ್ನು ಅಕ್ಟೋಬರ್ 18ರ ಸಂಜೆ 5 ಗಂಟೆಯೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇಲ್ಲಿ ಪಡೆದು ಅದರಲ್ಲಿರುವ ವಿವರಗಳನ್ನು ಭರ್ತಿ ಮಾಡಿ ತಮ್ಮ ಇಲಾಖೆಯ ಮೇಲಾಧಿಕಾರಿಗಳಿಂದ ದೃಢೀಕರಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ದೂರವಾಣಿ ಸಂಖ್ಯೆ: 0821-2564179ಅನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೂರವಾಣಿ ಸಂಖ್ಯೆ: 0821-2427890ಅನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Leave a Reply

comments

Related Articles

error: