ಕರ್ನಾಟಕಮೈಸೂರು

ಕ್ರೀಡೆಗೆ ಪ್ರೋತ್ಸಾಹ ನೀಡಲು ಸಿದ್ಧ: ಪ್ರಮೋದ್ ಮಧ್ವರಾಜ್

ಯುವ ಜನತೆ ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡಾ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.

ದಸರಾ ಕ್ರೀಡಾ ಉಪಸಮಿತಿ ವತಿಯಿಂದ ರಾಜ್ಯಮಟ್ಟದ ದಸರಾ ಕ್ರೀಡಾ ಸ್ಪರ್ಧೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಚಾಲನೆ ನೀಡಿದ ಅವರು ಕ್ರೀಡೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಲು ಸಿದ್ಧವಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಪ್ಯಾರಾಲಿಂಪಿಕ್ಸ್ ನಲ್ಲಿ ರಜತ ಪದಕ ವಿಜೇತೆ ದೀಪಾ ಮಲಿಕ್ ಮಾತನಾಡಿ ನಾವು ನಮಗಾಗಿ ಆಟ ಆಡಿ ಗೆದ್ದಿದ್ದಲ್ಲ. ದೇಶಕ್ಕಾಗಿ ಗೆದ್ದಿದ್ದೇನೆ ಎಂದರು.

ವೇದಿಕೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ಸಚಿವರಾದ ಮಹದೇವಪ್ಪ, ಮಹದೇವಪ್ರಸಾದ್, ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: