ಕರ್ನಾಟಕಪ್ರಮುಖ ಸುದ್ದಿ

ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಭೇಟಿ

ರಾಜ್ಯ(ಬೆಂಗಳೂರು)ಅ.18:- ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿದ್ದು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ನಗರದಲ್ಲಿ ಭಾರೀಮಳೆಯಿಂದಾಗಿ ನೀರು ತುಂಬಿಕೊಂಡಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಈ ಮಧ್ಯೆ ಎಚ್.ಎಸ್ ಆರ್ ಲೇಔಟ್  ಭಾಗದಲ್ಲಿ   ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.

ಈ ವೇಳೆ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಹಂತಹಂತವಾಗಿ ಸಮಸ್ಯೆಗಳನ್ನು ಬಗೆ ಹರಿಸುತ್ತೇವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದರು. ಬಿಬಿಎಂಪಿ ಮತ್ತು ಜಲಮಂಡಳಿ  ನಡುವೆ ಸಮನ್ವಯತೆ ಕೊರತೆ ಇದೆ. ಎಲ್ಲರನ್ನೂ ಕರೆದು ಮಾತನಾಡುತ್ತೇನೆ. ಮಂತ್ರಿ ಡೆವಲಪರ್ಸ್ ಒತ್ತುವರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಎನ್ ಜಿಟಿ ಆದೇಶ ನೀಡಿದೆ. ಅದರಂತೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: