ಮೈಸೂರು

ಕೌಟುಂಬಿಕ ಕಲಹ : ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ

ಮೈಸೂರು,ಅ.18:- ಮೈಸೂರಿನಲ್ಲಿ ಕೌಟುಂಬಿಕ ಕಲಹದಿಂದ  ಪತ್ನಿಗೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಸರಸ್ವತಿಪುರಂ ಬಡಾವಣೆಯಲ್ಲಿ ಕೆಲ ನಿಮಿಷದ ಹಿಂದೆಯಷ್ಟೇ ನಡೆದಿದೆ.

ಹಲ್ಲೆಗೊಳಗಾದವರನ್ನು ನಾಗರತ್ನ(34)ಎಂದು ಹೇಳಲಾಗಿದೆ. ಪತಿ ಬಂಗಾರು ನಾಯಕ್ ಬಾಳೆಹಣ್ಣಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ವರ್ಷದಿಂದಲೂ ಇವರಿಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ನಾಗರತ್ನ ಕೆಲಸಕ್ಕೆ ಹೋಗುವಾಗ ಹಿಂದಿನಿಂದ ಬಂದು ಮಚ್ಚಿನಲ್ಲಿ ಹಲ್ಲೆ ನಡೆಸಿದ್ದಾನೆ. ಘಟನಾ ಸ್ಥಳಕ್ಕೆ ಎಸಿಪಿ ಪೂರ್ಣಚಂದ್ರ ತೇಜಸ್ವಿ, ಸರಸ್ವತಿಪುರಂ ಠಾಣೆಯ ಇನ್ಸಪೆಕ್ಟರ್ ತಿಮ್ಮರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಯಲ್ಲಿ ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ   ಸಾರ್ವಜನಿಕರು ದಾಖಲಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: