ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಕಿರುತೆರೆ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನ

ರಾಜ್ಯ(ಬೆಂಗಳೂರು)ಅ.18:- ಕಿರುತೆರೆಯಲ್ಲಿ ಹಾಸ್ಯ ಪ್ರಧಾನ ಪತ್ರಗಳನ್ನು ನಿರ್ವಹಿಸುತ್ತಿದ್ದ  ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.

ಅವರಿಗೆ 84ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ಇಂದು ಬೆಳಗಿನ ಜಾವ 6.30ರ ಸುಮಾರಿಗೆ  ಅರಕೆರೆಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾಪ ಪಾಂಡು, ಸಿಲ್ಲಿ ಲಲ್ಲಿ  ಧಾರಾವಾಹಿಯ ಪಾತ್ರದಿಂದ ಜನಪ್ರಿಯತೆ ಗಳಿಸಿದ್ದ ಇವರು ನಟರಂಗ ತಂಡದೊಟ್ಟಿಗೆ ಗುರುತಿಸಿಕೊಂಡಿದ್ದರು. ಶಂಕರ್ ​ರಾವ್​ ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದು, ಒಂದಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದರು. ಬನಶಂಕರಿ ಚಿತಾಗಾರದಲ್ಲಿ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Leave a Reply

comments

Related Articles

error: