ಮೈಸೂರು

ಸುಬ್ರಹ್ಮಣ್ಯೇಶ್ವರಸ್ವಾಮಿ  ವಿಗ್ರಹಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಪುಷ್ಪಾರ್ಚನೆ

ಮೈಸೂರು,ಅ.18:- ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿ ಗಟ್ಟವಾಡಿ ಗ್ರಾಮದ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 18ಅಡಿ ಎತ್ತರದ ಸುಬ್ರಹ್ಮಣ್ಯೇಶ್ವರಸ್ವಾಮಿ  ವಿಗ್ರಹ ಇಂದು ಮೈಸೂರಿಗೆ ಆಗಮಿಸಿತು.

ಬೆಂಗಳೂರಿನಿಂದ ಕರೆತರಲಾದ ವಿಗ್ರಹವನ್ನು ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸ್ವಾಗತಿಸಿದರು. ಏಕಶಿಲಾ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

ನಂಜನಗೂಡು ತಾಲೂಕಿನ ಗಟ್ಟವಾಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಮಾರು 36 ಅಡಿ ಎತ್ತರದಲ್ಲಿ 18 ಅಡಿ ಎತ್ತರದ ಈ ಏಕಶಿಲಾ ಸುಬ್ರಹ್ಮಣ್ಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಶಿಲಾಮೂರ್ತಿಯನ್ನು ಮೈಸೂರಿನಿಂದ ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಆವರಣಕ್ಕೆ ಕೊಂಡೊಯ್ಯಲಿದ್ದು ಅಲ್ಲೂ ಕೂಡ ಪುಷ್ಪಸಮರ್ಪಣೆ ನಡೆಯಲಿದೆ.

ಈ ಸಂದರ್ಭ ನಂಜನಗೂಡು ಶಾಸಕ ಹರ್ಷವರ್ಧನ್, ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ದೇವಸ್ಥಾನದ ಧರ್ಮದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: